
ನಾಳೆ ವರಮಹಾಲಕ್ಷ್ಮಿ ಹಬ್ಬ. ಎಂದಿನಂತೆ ಅಮ್ಮನ ಮನೆಯಲ್ಲಿದ್ದಾಗ ಹಬ್ಬಗಳ ನೆನಪಾಗುತ್ತಿದೆ. ಬೆಂಗಳೂರಿನಲ್ಲಿ ಹಬ್ಬಗಳು ಬಂದರೆ ಎಲ್ಲೆಲ್ಲಿದ ಸಂಭ್ರಮ. ಮಾರುಕಟ್ಟೆಯ ತುಂಬಾ ಹಬ್ಬಕ್ಕೆ ಬೇಕಾಗುವ ಹೂವು ಪತ್ರೆಗಳು, ಹಣ್ಣುಗಳು, ಮಾವಿನ ಸೊಪ್ಪು-ಬಾಳೆ ಕಂದು, ಅಲಂಕಾರಕ್ಕೆ ಬಣ್ಣಬಣ್ಣದ ಕಾಗದಗಳು. ಹಬ್ಬದ ವಾರವೆಲ್ಲ ರೇಡಿಯೋ/ದೂರದರ್ಶನ ಎಲ್ಲರೂ ಭಾಗ್ಯಾದ ಲಕ್ಷ್ಮಿ ಬಾರಮ್ಮ ಅಂತ ಕರೆಯುವವರೇ :))ಹಬ್ಬದ ದಿನ ಮುಂಜಾನೆ ಚುಮುಚುಮು ಬೆಳಕಿರುವಾಗಲೇ ಎದ್ದು ಮನೆ ಮುಂದೆ ದೊಡ್ಡ...